Breaking News

ಗೋಕರ್ಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಜನಾರ್ದನ ಪೂಜಾರಿ.

ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಇಂದು ಸಂಜೆ ಮಾಜಿ ಕೇಂದ್ರ ಸಚಿವ ಹಾಗೂ ಮಂಗಳೂರು ದಸರಾ ರೂವಾರಿ ಜನಾರ್ಧನ ಪೂಜಾರಿ ಭೇಟಿ ನೀಡಿ ದೇವರ ದರ್ಶನ ಪಡೆದರು .ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು .ಗೋಕರ್ಣನಾಥ ದೇವರ ಮುಂದೆ ನಿಂತು ಮಾತನಾಡಿದ ಜನಾರ್ಧನ ಪೂಜಾರಿ ನಾನು ತಪ್ಪು ಮಾಡಿದ್ದೇನೆ ನನ್ನನ್ನು ಕ್ಷಮಿಸಿ ಎಂದು ಮೊರೆಯಿಟ್ಟರು.ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲ್ಲದಿದ್ದರೆ ನಾನು ಕುದ್ರೋಳಿ ಗೋಕರ್ಣನಾಥ ದೇವಾಲಯ ಮಸೀದಿ ಚರ್ಚ ಗಳಿಗೆ ಹೋಗುವುದಿಲ್ಲ ಎಂದು ಜನಾರ್ಧನ ಪೂಜಾರಿ ಘೋಷಣೆ ಮಾಡಿದ್ದರು .ಆದರೆ ಇಂದು ಜನಾರ್ಧನ ಪೂಜಾರಿ ಕುದ್ರೋಳಿ ದೇವಸ್ಥಾನಕ್ಕೆ ಸುಮಾರು 3 ತಿಂಗಳ ಬಳಿಕ ಭೇಟಿ ನೀಡಿದ್ದಾರೆ .

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *