Breaking News

ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲ್ಲ: ಕತ್ತಿ ಸ್ಪಷ್ಟನೆ.

ಚಿಕ್ಕೋಡಿ: ಬಿಜೆಪಿ ರಾಷ್ಟ್ರೀಯ ನಾಯಕರು ಆಪರೇಷನ್ ಕಮಲ‌ ನಡೆಯುವದಿಲ್ಲ ಎಂದು ಹೇಳಿದ್ದಾರೆ. ಆ ಪ್ರಕಾರವೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ಳಲಿದ್ದೇವೆ ಎಂದುಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು.‌ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಷನ್ ಕಮಲ‌ ನಡೆಯುವದಿಲ್ಲ.ಆದರೆ ಮೈತ್ರಿ ಸರಕಾರ ಬಿದ್ದು ಹೋದರೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ನಾವು ರಚನೆ ಮಾಡೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ರಾಜ್ಯದ ಸಿಎಂ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ನಾಚಿಕೆ ಬುದ್ದಿ ಇಲ್ಲದೆ ಸಿಎಂ ಸರಕಾರ ನಡೆಸಿದರೆ ನಾವೇನು ಮಾಡಬೇಕು ಎಂದು ಕಿಡಿ ಕಾರಿದರು.ಮುಂದೆ ಚುನಾವಣೆ ಬಂದರೆ ಬರತಕ್ಕಂಥ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವದು ನಿಶ್ಚಿತ ಎಂದರು‌ .ಯಡಿಯೂರಪ್ಪನವರು ಯಾವಾಗ ಸಿಎಂ ಆಗೋರು ಎಂಬ ಮಾಧ್ಯಮದ ಪ್ರಶ್ನೆಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಕತ್ತಿ 25 ವರ್ಷದ ಬಳಿಕ ಸಿಎಂ ಆಗಲಿದ್ದಾರೆ ಎಂದು ವ್ಯಂಗ್ಯವಾಡಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *