Breaking News

ಚಿರತೆ ದಾಳಿ: ಮೂವರು ಗ್ರಾಮಸ್ಥರು ಅಸ್ವಸ್ಥ.

ದಾವಣಗೆರೆ; ಆಹಾರಕ್ಕಾಗಿ ಗ್ರಾಮದೊಳಗೆ ನುಗ್ಗಿದ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದ್ದು ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ.ಆಹಾರಕ್ಕಾಗಿ ಗ್ರಾಮದೊಳಗೆ ಚಿರತೆ ನುಗ್ಗಿದ್ದು, ಮನೆಯೊಂದರಲ್ಲಿ ಅವಿತು ಕುಳಿತಿದೆ. ಈ ವೇಳೆ ಮನೆಯಿಂದ ತಪ್ಪಿಸಿಕೊಂಡು ಹೋಗುವಾಗ ಮೂವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿಮೂವರು ಗಾಯಗೊಂಡಿದ್ದು ಗಾಯಗೊಂಡವರನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇದೀಗ ಚಿರತೆ ಪೊದೆಯೊಳಗೆ ಅವಿತು ಕುಳಿತಿದೆ ಎ‌ನ್ನಲಾಗುತ್ತಿದೆ. ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು, ಚಿರತೆ ಹಿಡಿಯಲು ಬಲೆಹಾಕಿ ಕಾದು ಕುಳಿತಿದ್ದಾರೆ. ಚಿರತೆಯ ಆಗಮನದಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *