Breaking News

ಕುತೂಹಲ ಮೂಡಿಸಿರುವ ಎಂ.ಬಿ. ಪಾಟೀಲ ಗೌಪ್ಯಸಭೆ.

ಬೆಳಗಾವಿ: ಮೈತ್ರಿ ಸರ್ಕಾರದ ಇಬ್ಬರು ಶಾಸಕರು ರಾಜಿನಾಮೇ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಡಾ.ಎಂ.ಬಿ.ಪಾಟೀಲ ಅವರು ಜಿಲ್ಲೆಯ ಕಾಂಗ್ರೇಸ್‍ನ ಎಲ್ಲ ಶಾಸಕರು ಮತ್ತು ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದರು.ಆದರೆ ಸಭೆಯ ಬಳಿಕ ಹೊರ ಬಂದ ನಾಯಕರ ಮುಖವೂ ಸಹ ಗಂಭೀರತೆಯಿಂದ ಕೂಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಡಾ.ಎಂ.ಬಿ.ಪಾಟೀಲ ಅವರು ನಗರದ ಸಕ್ರ್ಯೂಟ್‍ಹೌಸ್‍ನಲ್ಲಿ ಜಿಲ್ಲೆಯ ಕಾಂಗ್ರೇಸ್‍ನ ಎಲ್ಲ ಶಾಸಕರು ಮತ್ತು ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದರು.ಸಭೆ ಬಳಿಕ‌ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ ಆನಂದ ಹಾಗೂ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನನಗೆ ಇದುವರೆಗೂ ಮಾಹಿತಿ ಇಲ್ಲ. ಸ್ಪಷ್ಟ ಮಾಹಿತಿ ಇಲ್ಲದೆ ಮಾತನಾಡುವದು ಸರಿಯಲ್ಲ ಎಂದರು.ಸಭೆಯಲ್ಲಿ ಬೆಳಗಾವಿ ಗ್ರಾಮೀಣದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಸದಲಗಾ ಶಾಸಕ ಗಣೇಶ ಹುಕ್ಕೇರಿ, ಖಾನಾಪೂರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ, ಮಾಜಿ ಶಾಸಕ ಫಿರೋಜ್ ಸೇಠ್, ಮಾಜಿ ಸಚಿವ ಮತ್ತು ಶಾಸಕ ಎಬಿ ಪಾಟೀಲ ಸೇರಿದಂತೆ ಇನ್ನುಳಿದ ಕಾಂಗ್ರೇಸ್ಸಿನ ವರಿಷ್ಠ ನಾಯಕರು ಭಾಗಿಯಾಗಿದ್ದರು.ಗೌಪ್ಯ ಸಭೆಯ ಬಳಿಕ ಹೊರಬಂದ ಎಲ್ಲರ ಮುಖವೂ ಗಂಭೀರತೆಯಿಂದ ಕೂಡಿತ್ತು. ಇದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *