ಹುಬ್ಬಳ್ಳಿ; ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬುಕ್ಕಿಯೊಬ್ಬನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೋಲೀಸರು ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿಯ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಹುಬ್ಬಳ್ಳಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಹಳೇ ಹುಬ್ಬಳ್ಳಿ ಅರವಿಂದ ನಗರದ ನಿವಾಸಿ ಮನೋಹರ ರಾಯಭಾಗ ಬಂಧಿತ ಆರೋಪಿ.ಬಂಧಿತನಿಂದ 3000 ರೂ., ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





