Breaking News

ಇಬ್ಬರ ಪ್ರಾಣ ತೆಗೆದುಕೊಂಡ ಬುಲೆರೋ, ಲಾರಿ ಅಪಘಾತ

ಮಂಗಳೂರು: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಹಳ್ಳ ಸೇತುವೆ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಾಂಮ್ಸನ್ ಹಾಗೂ ಸೈರಸ್ ಎಂಬವರು ನಂತರದಲ್ಲಿ ಮೃತ ಪಟ್ಟಿದ್ದಾರೆಜನಾರ್ದನ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *