Breaking News

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಆನೇಕಲ್: ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವವು
ಬೆಂಗಳೂರು ಹೊರವಲಯ ಆನೇಕಲ್ನ ನಾರಾಯಣಪುರದ ಮನೆಯೊಂದರಲ್ಲಿ ಪತ್ತೆಯಾಗಿದೆ.
ಚೌಡಪ್ಪ (45) ಮೃತ ದುರ್ದೈವಿ.
ಮೃತ ಚೌಡಪ್ಪ ನಾರಾಯಣ ಪುರದ ಮನೆಯಲ್ಲಿ ಒಬ್ಬನೇ ಇರುತ್ತಿದ್ದ.‌ ಒಂದು ವರ್ಷದ ಹಿಂದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ. ಹಾಗೂ ಇದ್ದ ಒಬ್ಬ ಮಗನು ಸಹ ಬೇರೊಂದು ಮನೆಯಲ್ಲಿ ವಾಸಿಸುತ್ತಿದ್ದ.‌
ವ್ಯಕ್ತಿ‌ ಒಮ್ಮಿಂದೊಮ್ಮೆಲೆ ಶವವಾಗಿ ಪತ್ತೆಯಾಗಿರುವದು ಅನುಮಾನಕ್ಕೆ ಎಡೆ ಮಾಡಿದೆ.
ಕಳೆದ ಎರಡು ದಿನಗಳಿಂದ ಸುತ್ತಮುತ್ತಲಿನ ಮನೆಯವರಿಗೆ ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.‌
ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಮನೆಯಲ್ಲಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆನೇಕಲ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌
ಮೃತ ದೇಹವನ್ನು ಆನೇಕಲ್ ಪೋಲಿಸರು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *