ಮಂಡ್ಯ: ಸರ್ಕಾರದ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳಿಗೆ ಹಾಗೂ ರೈತರಿಗೆ ತಲುಪಿಸುವ ಕೆಲಸವನ್ನು ಕೃಷಿ, ತೋಟಗಾರಿಕೆ, ಎಪಿಎಂಸಿ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಸಮಾಜದ ಅಧ್ಯಕ್ಷ ಜಾನಕೀರಾಂ ಸೂಚನೆ ನೀಡಿದರು.ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆಯಲ್ಲಿ ಇಂದು ನಡೆದ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಸೇರಿದಂತೆ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಸೌಲಭ್ಯಗಳನ್ನು ರೈತರು ಪಡೆದುಕೊಂಡು ಮಳೆಯಾಗಿ ಬೆಳೆಯಾಗದ ಸಂದರ್ಭದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಟಿ.ಎಸ್.ಮಂಜುನಾಥ್, ಜಾನುವಾರು ಅಭಿವೃದ್ಧಿಅಧಿಕಾರಿ ಶಂಕರ್, ಕೃಷಿಕ ಸಮಾಜದ ಉಪಾಧ್ಯಕ್ಷ ವಿಠಲಾಪುರ ಸುಬ್ಬೇಗೌಡ, ನಿರ್ದೇಶಕರಾದ ಬಂಡಿಹೊಳೆ ರಂಗನಾಥಗೌಡ, ಅಕ್ಕಿಹೆಬ್ಬಾಳು ರಾಮಸ್ವಾಮಿ, ಹೆತ್ತಗೋನಹಳ್ಳಿ ನಾರಾಯಣಗೌಡ, ಜಗಧೀಶ್, ಬೇಲದಕೆರೆ ಚನ್ನೇಗೌಡ, ಬೀರವಳ್ಳಿ ಮಂಜೇಗೌಡ, ಜಾಗಿನಕೆರೆ ನಾರಾಯಣಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಕೃಷಿ ಅಧಿಕಾರಿ ಜಯಶಂಕರ ಆರಾಧ್ಯ ಸಭೆಯನ್ನು ನಡೆಸಿಕೊಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news





