ಉಡುಪಿ: ಆರು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಬ್ಯಾಡ್ಮಿಂಟನ್ ಸಬ್ ಜ್ಯೂನಿಯರ್ ರಾಕಿಂಗ್ ಪಂದ್ಯಾವಳಿ ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯ ವತಿಯಿಂದ ಮಣಿಪಾಲದ ಮರೀನಾ ಮತ್ತು ಉಡುಪಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ.
ಮಣಿಪಾಲದ ಮರೀನಾ ಒಳಾಂಗಣ ಕ್ರೀಡಾಂಗದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು.
ಉಡುಪಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಪಂದ್ಯಾವಳಿಗೆ ಚಾಲನೆ ನೀಡಿದರು. ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ ಅಧ್ಯಕ್ಷ ದಿನಕರ ಬಾಬು ಮುಂತಾದವರು ಉಪಸ್ಥಿತರಿದ್ದರು,
ದೇಶದ ವಿವಿಧ ರಾಜ್ಯದ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಬಾಲಕ ಬಾಲಕಿಯರು ಕೂಟದಲ್ಲಿ ಭಾಗವಹಿಸುತ್ತಿದ್ದಾರೆ.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮಣಿಪಾಲ ವಿಶ್ವ ವಿದ್ಯಾಲಯದ ಉಪಕುಲಪತಿ ಡಾಕ್ಟರ್ ಎಚ್ ಎಸ್ ಬಳ್ಳಾಳ್ ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ಕಾರ್ಯಕಾರಿ ಸದಸ್ಯ ಸುಕಾಂತ್ ದಾಸ್ ಕೂಟದ ನಿರ್ವಹಣೆ ಹೊಣೆಹೊತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





