Breaking News

ಮೋಸದಿಂದ ಸುಲಿಗೆ ಮಾಡುತ್ತಿದ್ದ ಖದೀಮರ ಬಂಧನ.

ಹುಬ್ಬಳ್ಳಿ: ಸಿದ್ಧಾರೂಢ ಮಠಕ್ಕೆ ಕರೆದುಕೊಂಡು ಹೋಗುವುದಾಗಿ‌ ಸವದತ್ತಿ‌ ಮೂಲದ ವ್ಯಕ್ತಿಯನ್ನು ನಂಬಿಸಿ ಆಟೋದಲ್ಲಿ ಗದಗ ರಸ್ತೆಯ ಹೊರ ವಲಯಕ್ಕೆ ಕರೆದುಕೊಂಡು ಹೋಗಿ ಹಲ್ಲೆ‌ಮಾಡಿ, ಹಣ, ಮೊಬೈಲ್ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸವದತ್ತಿ ಮೂಲದ ಮೌಳೇಶ ದಿನ್ನಿಮನಿ ಹಣ ಕಳೆದುಕೊಂಡವರು. ಆಟೋ ಚಾಲಕ ರಮೇಶ ಪಾಂಚಾನ, ಲಕ್ಷ್ಮೀ, ಶಶಿಕಲಾ ಹಾಗೂ ರಾಜು ಬಂಧಿತರು.ಇಬ್ಬರು ಪುರುಷರು ಹಾಗೂ ಮಹಿಳೆಯರು ಸೇರಿ ಪ್ರಯಾಣಿಕರ ಸೋಗಿನಲ್ಲಿ ಸುಲಿಗೆ ಮಾಡಿದ್ದರು.ಕೂಡಲೇ ಜಾಗೃತರಾದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *