ಹುಬ್ಬಳ್ಳಿ: ಹು- ಧಾ ಮಹಾನಗರ ಪಾಲಿಕೆಯ ತಾರತಮ್ಯ ನೀತಿ ಹಾಗೂ ಕಿರುಕುಳದಿಂದ ಬೇಸತ್ತು ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೂಸಪೇಟೆಯಲ್ಲಿ ನಡೆದಿದೆ.ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕ.ಮೃತ ಕಲ್ಲಪ್ಪ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ನೇರ ವೇತನಕ್ಕಾಗಿ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಹ ನೇರ ವೇತನ ಜಾರಿಯಾಗಿರಲಿಲ್ಲ. ಕಳೆದ ವಾರ ನೇರ ವೇತನಕ್ಕೆ ಆಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಸಹ ಮಾಡಿದ್ದ. ಆದರೆ ಟ್ವೀಟ್ ಗೆ ಪೂರಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಪಾಲಿಕೆಯ ನೀತಿಗೆ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.ಪೌರ ಕಾರ್ಮಿಕರಿಂದ ಪ್ರತಿಭಟನೆಗೆ ಸಿದ್ದತೆ: ಪೌರ ಕಾರ್ಮಿಕ ಕಲ್ಲಪ್ಪ ಆತ್ಮಹತ್ಯೆಗೆ ಪಾಲಿಕೆ ನೇರ ಹೊಣೆ ಎಂದು ಕಾರ್ಪೋರೇಷನ್ ಎದುರು ಶವ ಕೊಂಡೊಯ್ದು ಪ್ರತಿಭಟನೆ ನಡೆಸಲು ಪೌರ ಕಾರ್ಮಿಕರು ನಿರ್ಧರಿಸಿದ್ದಾರೆ.ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





