ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಜಾಗೃತಿ ಜಾಥಾ.

ಮಂಡ್ಯ: ಆಡಳಿತ, ಪ್ರಗತಿ ಪ್ರೌಢಶಾಲೆ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿಂದುಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಅರ್.ಪೇಟೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.ತಹಶಿಲ್ದಾರ ಎಂ. ಶಿವಮೂರ್ತಿ ಹಸಿರು ನಿಶಾನೆಯ ಬಾವುಟವನ್ನು ಪ್ರದರ್ಶಿಸುವ ಮೂಲಕ ಜಾಥಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು, 2020ಕ್ಕೆ ನಮ್ಮ ಕರ್ನಾಟಕ ರಾಜ್ಯವನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ. 2018ನೇ ಸಾಲಿನಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಒಂದೇ ಒಂದು ಮಲೇರಿಯಾ ಪ್ರಕರಣವು ಕೂಡಾ ಪತ್ತೆಯಾಗಿಲ್ಲ…ಜನಸಾಮಾನ್ಯರು ತಮ್ಮ ಮನೆಯ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳು ತಮ್ಮ ಸಂತಾನೋತ್ಪತ್ತಿ ಮಾಡದಂತೆ ತಡೆಯಬೇಕು..ತಿಪ್ಪೇ ಗುಂಡಿಗಳನ್ನು ಊರಿನಿಂದ ಹೊರಕ್ಕೆ ಸ್ಥಳಾಂತರಿಸಿ ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ಶಿವಮೂರ್ತಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಗನ್ನಾಥ, ಹಿರಿಯ ಆರೋಗ್ಯ ಪರಿವೀಕ್ಷಕ ಶೀಳನೆರೆ ಸತೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಯರಾಂ ಸೇರಿದಂತೆ ಆಶಾ, ಆರೋಗ್ಯ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂಧಿಗಳು ಭಾಗವಹಿಸಿದ್ದರು… ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಗೃತಿ ಜಾಥಾ ನಡೆಸಿ ಘೋಷಣೆಯನ್ನು ಕೂಗಿ ಜನಸಾಮಾನ್ಯರಲ್ಲಿ ಮಲೇರಿಯಾ ರೋಗದ ವಿರುದ್ಧ ಜಾಗೃತಿ ಮೂಡಿಸಲಾಯಿತು…

Share News

About admin

Check Also

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ …

Leave a Reply

Your email address will not be published. Required fields are marked *

You cannot copy content of this page