ಮಂಡ್ಯ : ಜಿಲ್ಲೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿಂದು ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಆರೋಗ್ಯ, ಆಶಾ ಕಾರ್ಯಕರ್ತೆಯರಿಗೆ ಮಲೇರಿಯ ರೋಗ ನಿಯಂತ್ರಣದ ಬಗ್ಗೆ ಮಾಹಿತಿ ಹಾಗೂ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಮಾತನಾಡಿ ಅನಾಫಿಲೀಸ್ ಎಂಬ ಸೊಳ್ಳೆಯು ಕಚ್ಚುವುದರಿಂದ ಮಲೇರಿಯಾ ರೋಗವು ಹರಡುತ್ತದೆ. ತಾಲ್ಲೂಕನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಸಹಾಯಕ ಕೀಟ ಶಾಸ್ತ್ರಜ್ಞೆ ಜಾನಕಿ ಅವರು ಮಲೇರಿಯಾ ರೋಗದ ಲಕ್ಷಣಗಳು ಹಾಗೂ ನಿಯಂತ್ರಣ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಂ.ಶಿವಮೂರ್ತಿ ಮಲೇರಿಯಾ ರೋಗವನ್ನು ರಾಜ್ಯದಿಂದ ಹೊಡೆದೋಡಿಸಲು ಎಲ್ಲರೂ ಸಹಕರಿಸಬೇಕು. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಹಕಾರವು ಅತ್ಯಗತ್ಯವಾಗಿ ಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಸತೀಶ್, ಶಿಕ್ಷಣ ಇಲಾಖೆಯ ಪ್ರಸನ್ನಕುಮಾರ್, ಹಿರಿಯ ಆರೋಗ್ಯ ಪರಿವೀಕ್ಷಕರಾದ ಶೀಳನೆರೆ ಸತೀಶ್, ಧರ್ಮೇಂದ್ರ ಮತ್ತಿತರರು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





