Breaking News

ಮುಸ್ಲಿಂ ಸಮುದಾಯ ರಕ್ಷಿಸಲು ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಚಾಮರಾಜನಗರ: ಗುಂಪು ಹತ್ಯೆಕೋರರನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಹಾಗೂ ದೇಶಾದ್ಯಂತ ಮುಸ್ಲಿಂ ಸಮುದಾಯ ರಕ್ಷಣೆಗಾಗಿ ವಿಶೇಷ ಕಾನೂನು ರೂಪಿಸುವಂತೆ ಒತ್ತಾಯಿಸಿ ಎಸ್ ಡಿ ಪಿ ಐ ಕಾರ್ಯಕರ್ತರು ಚಾಮರಾಜನಗರ ದಲ್ಲಿ ಪ್ರತಿಭಟನೆ ನಡೆಸಿದರು. ‌ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಡಳಿತ ಭವನ ತಲುಪಿದ ಪ್ರತಿಭಟನಾಕಾರರು ಅಲ್ಲಿ ಕೆಲಕಾಲ ಧರಣಿ ನಡೆಸಿದರು.ಈ ವೇಳೆ ಎಸ್ ಡಿ ಪಿ ಐ ಜಿಲ್ಲಾ ಅಧ್ಯಕ್ಷ ಅಬ್ರಾರ್ ಅಹಮದ್ ಮಾತನಾಡಿ, ಜಾರ್ಖಂಡ್ ರಾಜ್ಯದ ಸರೈಕೆಲಾ ಎಂಬ ಜಿಲ್ಲೆ ಯಲ್ಲಿ 24 ವರ್ಷ ವಯಸ್ಸಿನ ಮುಸ್ಲಿಂ ಸಮುದಾಯದ ತಬ್ರೇಜ್ ಅನ್ಸಾರಿ ಎಂಬ ಅಮಾಯಕ ಯುವಕನಿಗೆ ಕೋಮುವಾದಿ ಗೂಂಡಗಳು ಮಾರಣಾಂತಿಕ ಹಲ್ಲೆ ನಡೆಸಿ ಒತ್ತಾಯ ಪೂರ್ವಕವಾಗಿ ಜೈ ಶ್ರೀರಾಮ್ ಹಾಗೂ ಜೈ ಹನುಮಾನ್ ಘೋಷಣೆ ಕೂಗಿಸುವ ಮೂಲಕ ಗುಂಪು ಹತ್ಯೆಮಾಡಿದ್ದಾರೆ ಎಂದು ಆರೋಪಿಸಿದರು.ಪ್ರಜಾಪ್ರಭುತ್ವದ ಅತಿದೊಡ್ಡ ದೇಶದ ಹೆಸರಾಗಿರುವ ಭಾರತ ದಲ್ಲಿ ಇಂತಹ ಘಟನೆ ಪದೇ ಪದೇ ಮರುಕಳಿಸುತ್ತಿರುವುದು ವಿಶ್ವವೇ ತಲೆತಗ್ಗುವಂತೆ ಮಾಡಿದೆ. ದೇಶದಲ್ಲಿರುವ ಅಲ್ಪಸಂಖ್ಯಾತ ಹಾಗೂ ದಲಿತರಿಗೆ ಆರ್ ಎಸ್ ಎಸ್ ಸಂಘಟನೆಯ ಗೂಂಡಗಳು ದೌರ್ಜನ್ಯ ಎಸಗುತ್ತಿದ್ದರು ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು ಕಂಡು ಕಾಣದಂತೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.ಕೂಡಲೇ ಹತ್ಯೆಕೋರರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಮುಸ್ಲಿಂ ಸಮುದಾಯ ರಕ್ಷಣೆ ಗೆ ವಿಶೇಷ ಕಾನೂನು ರೂಪಿಸಬೇಕೆಂದು ಮುಖ್ಯಮಂತ್ರಿ ಹಾಗೂ ರಾಷ್ಟಪತಿಗಳಿಗೆ ಈ ಮೂಲಕ ಪ್ರತಿಭಟನಾಕಾರರು ಮನವಿ ಮಾಡಿದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *