ಹುಬ್ಬಳ್ಳಿ: ಕಾಳಿ ನದಿ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯರನ್ನು ಜುಲೈ. 4 ರಂದು ದೆಹಲಿಯಲ್ಲಿ ಭೇಟಿಯಾಗಿ ಮನವರಿಕೆ ಮಾಡಲಾಗುವದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಿರುವದು ಉತ್ತಮ ಬೆಳವಣಿಗೆ. ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಹಾಗೂ 500-600 ಕೆರೆಗಳ ಪುನಶ್ಚೇತನಕ್ಕೆ ಕಾಳಿ ನದಿ ಅನುಕೂಲವಾಗಲಿದೆ. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನೇ ಅಮೃತಧಾರೆ ಯೋಜನೆಯಡಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ಜೋಡಣೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕಾಳಿ ನದಿಯನ್ನು ಸೇರಿಸುವಂತೆ ಒತ್ತಾಯಿಸಲಾಗುವದು ಎಂದರು.ಮಳೆಗಾಲದ ಸಂದರ್ಭದಲ್ಲಿ ಕಾಳಿ ನದಿಯ ಸುಮಾರು 3 ಸಾವಿರ ಟಿಎಂಗೂ ಹೆಚ್ಚು ನೀರು ಸಮುದ್ರ ಪಾಲಾಗುತ್ತಿದ್ದು, ಕಾಳಿ ನದಿ ನೀರನ್ನು ಮಲಪ್ರಭೆಗೆ, ಕೃಷ್ಣಾ ನದಿ ನೀರನ್ನು ಘಟಪ್ರಭಾಗೆ ಹರಿಸುವಂತೆ ನಿರಣಿ ವರದಿ ಸರಿ ಇದೆ. ಈ ಮಹತ್ವದ ಯೋಜನೆ ಜಾರಿಗೊಳಿಸಲು ಉತ್ತರ ಕರ್ನಾಟಕದ ಎಲ್ಲಾ ಮಠಾಧೀಶರು ಹಾಗೂ ರಾಜಕಾರಣಿಗಳು ಪಕ್ಷಾತೋತವಾಗಿ ಬೆಂಬಲ ನೀಡಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡಲಿ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿಯಲಿದೆ.ಈ ಕುರಿತು ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸುವದಾಗಿ ತಿಳಿಸಿದರು.ಇದೇ ವೇಳೆ ದೆಹಲಿಗೆ ಪ್ರಯಾಣ ಬೆಳೆಸಿದ ಉತ್ತರ ಕರ್ನಾಟಕದ ಮಠಾಧೀಶರನ್ನು ರೈತ ಮುಖಂಡರು ಶಾಲು ಹೊದಿಸಿ ಬಿಳ್ಕೊಟ್ಟರು.ಈ ಸಂದರ್ಭದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನ ನಂದಪುರಿ ಸ್ವಾಮೀಜಿ , ಉಪ್ಪಾರ ಭಗೀರಥ ಪೀಠದ ಶ್ರೀ ಪುರುಷೋತ್ತಮ ಸ್ವಾಮೀಜಿ, ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಪೀಠದ ಶ್ರೀ ಶಾಂತ ವೀರ ಸ್ವಾಮೀಜಿ, ಮಡಿವಾಳ ಗುರು ಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿಯವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





