Breaking News

ವಿವಿ ಸಾಗರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆಗೆ ಸಿದ್ದ: ವೆಂಕಟರಮಣಯ್ಯ.‌

ಚಿತ್ರದುರ್ಗ: ಆಗಸ್ಟ್ 10 ರೊಳಗಾಗಿ ವಿವಿ ಸಾಗರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ
ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಕೈಗೊಂಡಿದ್ದ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಮಾತು ತಪ್ಪುವುದಿಲ್ಲ. ನಾನು ಕೂಡಾ ರೈತನ ಮಗ ಎಂದರು.‌
ಜುಲೈ 30 ರ ವೇಳೆಗೆ ಮಳೆ ಆಗುತ್ತೆ. ಆನಂತರ ವಾಣಿ ವಿಲಾಸ ಸಾಗರಕ್ಕೆ ನೀರು ಬರುತ್ತೆ ಎಂದರು.
ಆಗಸ್ಟ್ 10 ರ‌ ಒಳಗಾಗಿ ‌ನೀರು ಬರದಿದ್ದರೆ‌ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹೋಗುತ್ತೇನೆ‌ ಎಂದು ತಿಳಿಸಿದರು. ‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *