Breaking News

ಜುಲೈ 8 ರಂದು ಬೆಳಗಾವಿ ಚಲೋ ಪ್ರತಿಭಟನಾ ಮೆರವಣಿಗೆ.

ಹುಬ್ಬಳ್ಳಿ: ರಾಜ್ಯಾದ್ಯಂತ ಹಿಂದೂಗಳನ್ನು ಕೆರಳಿಸಿದ ಗೋ ರಕ್ಷಕ ಶಿವು ಉಪ್ಪಾರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸರ್ಕಾರ ಸಿ.ಬಿ.ಐ. ಗೆ ವಹಿಸಬೇಕು ಎಂದು ಕರ್ನಾಟಕ ಶ್ರೀರಾಮ‌ಸೇನಾ ರಾಜ್ಯ ಕಾರ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ ಎಂದು ಆಗ್ರಹಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಶಿವು ಉಪ್ಪಾರ ಸಾವನ್ನು ಕಡೆಗಣಿಸುತ್ತಿದ್ದು, ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ಗೆ ವಹಿಸಲು ಆಗ್ರಹಿಸಿ ಇದೇ ಜುಲೈ 8 ರಂದು ಬೆಳಗಾವಿ ಚಲೋ ಏರ್ಪಡಿಸಲಾಗಿದ್ದು, ಅಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲಾಗುವದು ಎಂದರು.
ಗೋ ರಕ್ಷಕ ಶಿವು ಸಾವು ಅಂತರರಾಜ್ಯ ಪ್ರಕರಣವಾಗಿದ್ದು, ಸರ್ಕಾರ ಸೂಕ್ತ ತನಿಖೆಯನ್ನು ಕೈಗೊಳ್ಳುವ ಮೂಲಕ ಶಿವು ಸಾವಿಗೆ ನ್ಯಾಯವನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಸಾವಿಗೂ ಮುಂಚೆ ಶಿವು ಮಾಡಿದ್ದ ವೀಡಿಯೋ ಹಾಗೂ ಆಡಿಯೋ ಆಗಿದ್ದರೂ ಸಹ ಸರ್ಕಾರ ಪ್ರಕರಣದ ತನಿಖೆಯನ್ನು ಕಡೆಗಣಿಸುತ್ತಿರುವ ಸರ್ಕಾರದ ನಡೆ ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಹೀಗಾಗಿ ಕೂಡಲೇ ಪ್ರಕರಣವನ್ನು ಸಿ.ಬಿ.ಐ. ಗೆ ವಹಿಸಲು ತಿಳಿಸಿದರು.
ಅಷ್ಟೇ ಅಲ್ಲದೇ ಶಿವು ಅವರ ಸಾವಿಗೆ ಸಂಭಂಧಿಸಿದವರ ಬಂಧನ ಮಾಡಬೇಕು. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ‌ಜೊತೆಗೆ ರಾಜ್ಯದಿಂದ ಕೇರಳ, ಗೋವಾ, ಆಂಧ್ರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಣಿಕೆಯನ್ನು ಈ ಕೂಡಲೇ ತಡೆಯಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಧಾರವಾಡ ವಿಭಾಗ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ, ವಿದುಳಕ ಹಳದಿಪುರ ಇದ್ದರು.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *