Breaking News

ರಮೇಶ ಜಾರಕಿಹೊಳಿ ರಾಜೀನಾಮೆ ಅಧಿಕೃತವಲ್ಲ

ಚಿಕ್ಕೋಡಿ : ರಮೇಶ ಜಾರಕಿಹೊಳಿ ಕಾಂಗ್ರೆಸ್ ನವರು. ಕಾಂಗ್ರೆಸ್ ನಲ್ಲಿಯೇ ಅವರು ಮುಂದುವರೆಯಲಿದ್ದಾರೆ ಎಂದು ಸಕ್ಕರೆ ಸಚೀವ ಆರ್ ಬಿ ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ನನ್ನ ಒಳ್ಳೆಯ ಸ್ನೇಹಿತ. ‌ಅವರು ಪಕ್ಷ ಬಿಟ್ಟು ಹೋಗುತ್ತಿಲ್ಲ. ಹಾಗೂ ಅವರ ಮನವೊಲಿಸುವ ಅಗತ್ಯವಿಲ್ಲ.‌
ರಮೇಶ ಅವರ ರಾಜೀನಾಮೆ ಅಧಿಕೃತವಲ್ಲ
ಎಂದು ಸಭಾಪತಿ ಸ್ಪಷ್ಟಪಡಿಸಿದ್ದಾರೆ ಎಂದರು.
ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಿನಾಮೆ ಪರ್ವ ಮುಕ್ತಾಯವಾಗಿದ್ದು,
ಮಹೇಶ್ ಕುಮಠಳ್ಳಿ ರಾಜಿನಾಮೆ ವಿಚಾರ ಸುಳ್ಳು ಊಹಾಪೋಹಗಳಿಗೆ ಬೆಲೆ ಕೊಡಬೇಡಿ. ಕುಮಠಳ್ಳಿ ಕಾಂಗ್ರೆಸ್ ಬಿಟ್ಟು ಹೊಗೋದಿಲ್ಲ ಕಾಂಗ್ರೆಸ್ ನಲ್ಲಿ ಇದ್ದಾರೆ ಮುಂದೆಯೂ ಇರುತ್ತಾರೆ ಎಂದು ತಿಳಿಸಿದರು.
ಸರ್ಕಾರ ರಚನೆ ಆದಾಗಿನಿಂದ ಸರ್ಕಾರ ಪತನ ಆಗುತ್ತೆ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಸರ್ಕಾರ ಪತನವಾಗಿಲ್ಲ ಎಂದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *