ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಬಸ್ ನಲ್ಲಿಯೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ಇದೀಗ ವೆನ್ಲೋಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





