ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ನಡೆದಿದೆ.ತಂದೆಯ ಹೇಯ ಕೃತ್ಯದಿಂದ 5 ವರ್ಷದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದು ಕುಡಿದ ಅಮಲಿನಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಮಾಡಿರುವುದಾಗಿ ತಿಳಿದು ಬಂದಿದೆ. ತಂದೆಯೇ ಅತ್ಯಾಚಾರ ನಡೆಸಿದ್ದಾನೆ ಎಂದು ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣೆಗೆ ತಾಯಿಯಿಂದ ದೂರು ದಾಖಲಾಗಿದ್ದು ಕಾಮುಕ ತಂದೆಯ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





