Breaking News

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ.

ಮೊಳಕಾಲ್ಮುರು: ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಬೇಕು ಹಾಗೂ ಬದಲಿನ ಶಿಕ್ಷಕರ ನೇಮಕ ನಡೆಸಬೇಕೆಂದು ಆಗ್ರಹಿಸಿ
ಮೊಣಕಾಲ್ಮೂರು ತಾಲ್ಲೂಕಿನ ಗಡಿ ಭಾಗವಾದ ಹುಚ್ಛಂಗಿ ದುರ್ಗದ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಗಿಲು ಹಾಕಿ ಊರಿನ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.
ಶಾಲೆಗೆ ಸಂಪೂರ್ಣ ಶಿಕ್ಷಕರು ಬರುವರೆಗೂ ಹಾಗೂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡುವರೆಗೂ ಶಾಲೆಯ ಬಾಗಿಲು ತೆಗೆಯುವದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ಹಾಗೂ 5 ರಿಂದ 8 ತರಗತಿ ಮಕ್ಕಳಿಗೆ ಓದಲು ಬರೆಯಲು ಬರುವುದಿಲ್ಲ .
ಇವರು ಯಾವ ರೀತಿಯಲ್ಲಿ ತರಗತಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಅಧಿಕಾರಿಗಳು ಬರುವವರೆಗೂ ಮುಷ್ಕರ ಕೈಬಿಡುವದಿಲ್ಲ ಎಂದು ತಿಳಿಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *