Breaking News

ಮೊಬೈಲ್ ಅಂಗಡಿಯಲ್ಲಿ ಕೈಚಳಕ ತೋರಿದ ಕಳ್ಳರು

ಆನೇಕಲ್ : ಪಟ್ಟಣದ ಮೊಬೈಲ್ ಅಂಗಡಿವೊಂದರಲ್ಲಿ ಕದೀಮರ ಗ್ಯಾಂಗ್ ಒಂದು ಅಂಗಡಿಯ ಮೇಲ್ಭಾಗದ ಶೀಟ್ ಕಟ್ ಮಾಡಿ ಕಳ್ಳರು ತಮ್ಮ ಕೈಚಳಕ ತೋರಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ರಸ್ತೆಯಲ್ಲಿ ನಡೆದಿದೆ.ಆನೇಕಲ್ ಪಟ್ಟಣದ ಅತ್ತಿಬೆಲೆ ರಸ್ತೆಯಲ್ಲಿರುವ ಅಂಜನಾದ್ರಿ ಮೊಬೈಲ್ ಅಂಗಡಿಯ ಮೇಲ್ಬಾಗದಲ್ಲಿದ್ದ ಕಬ್ಬಿಣದ ಶೀಟ್ ಗಳನ್ನು ಕಟ್ ಮಾಡಿ ಮಧ್ಯರಾತ್ರಿ ಅಂಗಡಿಯಲ್ಲಿದ್ದ ಇಪ್ಪತ್ತು ಸಾವಿರ ನಗದು ಸೇರಿದಂತೆ ಐವತ್ತು ಸಾವಿರ ಬೆಲೆ ಬಾಳುವ ವಸ್ತುಗಳನ್ನು ಕದಿಮರು ಕಳ್ಳತನ ಮಾಡಿದ್ದು ಎಂದಿನಂತೆ ಮುಂಜಾನೆ ಅಂಗಡಿ ಮಾಲೀಕ ಅಂಗಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಇನ್ನು ಘಟನಾ ಸಂಬಂಧ ಆನೇಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *