Breaking News

ಗ್ರಾ.ಪಂ.ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ

ಯಾದಗಿರಿ: ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಪುತ್ರನ ಬರ್ಬರ ಹತ್ಯೆ ಮಾಡಿರುವ ಘಟನೆಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ನಡೆದಿದೆ.ಕಾಂಗ್ರೆಸ್ ಪಕ್ಷದ ಮುಖಂಡ, ಹತ್ತಿಕುಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶರಣಪ್ಪ ಗಡ್ಡೀಮನಿ ಪೂಜಾರಿ (55), ಪುತ್ರ ಮಹಾದೇವಪ್ಪ (29) ಕೊಲೆಯಾದ ದುರ್ದೈವಿಗಳು.ಯಾದಗಿರಿ ಸಮೀಪದ ಹತ್ತಿಕುಣಿ ಸಮೀಪದ ಹತ್ತಿಕುಣಿ ಭಾಗದಸರಕಾರಿ ತೋಟಗಾರಿಕೆ ಪ್ರದೇಶ ಹಾಗೂ ರಕ್ಷಿತ ಅರಣ್ಯ ಪ್ರದೇಶ ಬಳಿ ಕೊಲೆ ಸಂಭವಿಸಿದೆ.ಕೊಲೆಯಾದ ಶರಣಪ್ಪಗೆ ನಾಲ್ವರು ಪುತ್ರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ಶಂಕೆ – ಸಂಬಂಧಿಗಳಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *