Breaking News

ಮತ್ತೆ ಏರಿಕೆಯಾದ ಕೃಷ್ಣ ನದಿ ಒಳ ಹರಿವು

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ದೂಧಗಂಗಾ ನದಿಗಳ ಒಳ ಹರಿವು ಹೆಚ್ಚಳವಾಗಿದೆ. ಕೃಷ್ಣಾ ನದಿಗೆ ಸುಮಾರು ೨೨೦೦೦ ಸಾವಿರ ಕ್ಯೂಸಕ್ಸ ನೀರು ಹರಿದು ಬರುತ್ತಿದೆ.
ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೆಳ ಹಂತದ ಬೋಜ- ಕಾರದಗಾ, ಭೋಜವಾಡಿ- ಕಣ್ಣೂರ- ಮಲಿಕವಾಡ ದತವಾಡ ಸೇತುವೆಗಳು ಜಲಾವೃತಗೊಂಡಿವೆ.‌ ೩ ಸೇತುವೆಗಳು ಸಹ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಳ ಹಂತದ ಬ್ರಿಡ್ಜ್ ಕಮ್ ಬಂದಾರಗಳಾಗಿವೆ.‌
ಸೇತುವೆಗಳು ಬಂದ್ ಆಗಿದ್ದರಿಂದ ವಾಹನ ಸವಾರರ ಪರದಾಟ ಪಡುವಂತಾಗಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *