Breaking News

ಮತ್ತೆ ಏರಿಕೆಯಾದ ಕೃಷ್ಣ ನದಿ ನೀರಿನ‌ ಪ್ರಮಾಣ

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧಗಂಗಾ ನದಿಗಳು ತುಂಬಿ ಹರಿಯುತ್ತಿದ್ದು ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಸಾಕಷ್ಟು ಏರಿಕೆಯಾಗಿದೆ. ನದಿ ಗಳು ತುಂಬಿ ಹರಿಯುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ೬ ಸೇತುವೆಗಳು ಜಲಾವೃತಗೊಂಡಿವೆ.ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ_ ಯಡೂರ, ದೂಧಗಂಗಾ ನದಿಯ ಕಾರದಗಾ_ ಭೋಜ, ವೇದಗಂಗಾ ನದಿಯ ಭೊಜವಾಡಿ_ ಕುಣ್ಣೂರ,ವೇದಗಂಗಾ ನದಿಯ ಸಿದ್ನಾಳ – ಅಕ್ಕೋಳ, ವೇದಗಂಗಾ ನದಿಯ ಜತರಾಟ- ಭೀವಶಿ ಹಾಗೂ ದುಧಗಂಗಾ ನದಿಯ _ ಮಲಿಕವಾಡ_ ದತ್ತವಾಡ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಮುಳುಗಡೆಯಾಗಿವೆ.ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಡುತ್ತಿದ್ದು ಸುತ್ತುವರೆದು ಪರ್ಯಾಯ ಮಾರ್ಗಗಳಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಇನ್ನೂ ಕೃಷ್ಣಾ ನದಿಗೆ 25 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿದು ಬರುತ್ತಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *