ಮಂಡ್ಯ: ಜಿಲ್ಲೆಯ ಸಿಂದಘಟ್ಟ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ವಿಶ್ವಮಾನವ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನೋತ್ಸವದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅಂಬೇಡ್ಕರ್ ವಿಚಾರ ವಾಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತುಕರ್ನಾಟಕ ರಾಜ್ಯ ಎಸ್.ಸಿ-ಎಸ್.ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಎನ್.ಮಹದೇವಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರುಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರು ಸಂಘಟಿತರಾಗಿ ತಮಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಪಡೆದುಕೊಂಡು, ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣಕೊಡಿಸಿ ಸಮಾಜದ ಮುಖ್ಯ ವಾಹಿನಿಗೆ ಬಂದು ಸಾಧನೆ ಮಾಡಬೇಕು ಎಂದು ಮನವಿ ಮಾಡಿದರು. ಎಪಿಎಂಸಿ ನಿರ್ದೇಶಕ ಸೋಮಸುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರುಸಾಹಿತಿಗಳಾದ ಬಿ.ಕೃಷ್ಣಪ್ಪ ಅಂಬೇಡ್ಕರ್ ವಿಚಾರಧಾರೆಯನ್ನು ಕುರಿತು ಮಾತನಾಡಿದರುಸಿಂದಘಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷ ಚಿದಂಬರ್, ಪಿಡಿಓ ಯಶಸ್ವಿನಿ, ಪ್ರಾಂಶುಪಾಲ ಜಯಶಂಕರಪ್ಪ, ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುಇದೇ ಸಂದರ್ಭದಲ್ಲಿ ಭಾಗ್ಯಶಂಕರಯ್ಯ ದಂಪತಿಗಳ ಪುತ್ರಿ ಎಸ್.ಚಿತ್ತಾರ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವೈದ್ಯಕೀಯ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ರೂಪೇಶ್, ಮೋಹನ ಮತ್ತು ಸಂಗಡಿಗರು ಹೋರಾಟ ಗೀತೆಗಳನ್ನು ಹಾಡಿದರು. ಶಿಕ್ಷಕಿ ಅನುಪಮಾ ಕಾರ್ಯಕ್ರಮ ನಡೆಸಿಕೊಟ್ಟರುಕಾರ್ಯಕ್ರಮಕ್ಕೂ ಮುನ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ಮೆರವಣಿಗೆ ಮಾಡಲಾಯಿತು
bigtvnews | Hubli Dharwad News | Kannada News | Karnataka News Hubli News | News In Hubli | Local news





