ಚಾಮರಾಜನಗರ: ಕೇಂದ್ರ ಸರ್ಕಾರದ ಬಜೆಟ್ ನ್ನು ವಿರೋಧಿಸಿ ಚಾಮರಾಜನಗರದಲ್ಲಿಂದು ಜನಹಿತ ಹೋರಾಟ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಖಾಲಿ ಡಬ್ಬಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ಬಜೆಟ್ ನೀರಸವಾಗಿದ್ದು, ಯಾವುದೇ ಜನೋಪಯೋಗಿ ಯೋಜನೆಗಳು ಇಲ್ಲ. ಚಾಮರಾಜನಗರ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಚಾಮರಾಜನಗರ ಮೆಟ್ಟುಪಾಳ್ಯಂ ರೈಲ್ವೆ ಮತ್ತು ಚಾಮರಾಜನಗರ ಕನಕಪುರ ಬೆಂಗಳೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಚಕಾರವೆತ್ತಿಲ್ಲ. ಗಡಿಜಿಲ್ಲೆ ಚಾಮರಾಜನಗರಕ್ಕೆ ಈ ಬಜೆಟ್ ನಲ್ಲಿ ಯಾವುದೇ ಕೊಡುಗೆಯನ್ನು ನೀಡಿಲ್ಲ ಎಂದು ಸಾಂಕೇತಿಕವಾಗಿ ಖಾಲಿ ಡಬ್ಬಗಳನ್ನು ಹಿಡಿದು ಪ್ರತಿಭಟಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





