Breaking News

ಹೆಣ್ಣು ಕೊಟ್ಟ ಅತ್ತೆಯ ಮೇಲೆ ಅಳಿಯನಿಂದ ಮಾರಣಾಂತಿಕ ಹಲ್ಲೆ

ದಾವಣಗೆರೆ; ಅಳಿಯನೇ ಅತ್ತೆಗೆ ಮಚ್ಚಿನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಾವಣಗೆರೆಯ ಹೊಂಡದ ವೃತ್ತದ ಬಳಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಭಾಗ್ಯ ಎಂದು ತಿಳಿದುಬಂದಿದೆ.
ಆರೋಪಿ ಅಭಿರಾಜ್ ಅಲಿಯಾಸ ಚೋಟು ಎಂಬಾತನನ್ನು ಬಂಧಿಸಲಾಗಿದೆ.
ಘಟನಾ ಸ್ಥಳಕ್ಕೆ ಗಾಂಧಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಹಲ್ಲೆಗೆ ನಿಖರ ಕಾರಣ ತಿಳಿದಿಲ್ಲ. ಸಧ್ಯ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮಹಿಳೆಯನ್ನು
ಚೀಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *