ಮಂಗಳೂರು: ಅಕ್ರಮವಾಗಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರಿನ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿನ ಶ್ರೀರಾಂ ಗ್ಯಾರೇಜ್ ಬಳಿ ಪೋಲೀಸರು ವಶಕ್ಕೆ ಪಡೆದಿದ್ದಾರೆ.ಎಕನಾಮಿಕ್, ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿ, ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 1 ಕೆಜಿ 100 ಗ್ರಾಂ ತೂಕದ ಗಾಂಜಾ, ಆಕ್ಟಿವಾ ಹೋಂಡಾ, ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತನ ವಿರುದ್ದ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಒಟ್ಟು 11 ಗಾಂಜಾ ಪ್ರಕರಣಗಳು ದಾಖಲಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





