ಚಿತ್ರದುರ್ಗ: ಬಿಜೆಪಿ ನಾಯಕರು ಶಾಸಕರ ಖರೀದಿ ಮಾಡುತ್ತಿದ್ದಾರೆ. ಹಾಗೂ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಆರೋಪಿಸಿಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಕಾರ್ಯಕರ್ತರು ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





