Breaking News

ರಾಜ್ಯದ ಶಾಸಕರಿಗೆ ಅಂತ್ಯ ಸಂಸ್ಕಾರ ನಡೆಸಿ ವಿನೂತನ ಪ್ರತಿಭಟನೆ

ಕೋಲಾರ: ರಾಜ್ಯದಲ್ಲಿ ಕಳೆದ ಕೆಲ‌ ದಿನಗಳಿಂದ ಶಾಸಕರ ರಾಜೀನಾಮೆಯ ಹೈ ಡ್ರಾಮಾ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಕೋಲಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ಸರ್ಕಾರ ಅಂತ್ಯ ಸಂಸ್ಕಾರ ಮಾಡಿ ವಿನೂತನ ಪ್ರತಿಭಟನೆ ನಡೆಸಲಾಯಿತು.ರಾಜ್ಯದ ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ರಾಜ್ಯದ 224 ಶಾಸಕರುಗಳಿಗೆ ನಗರದ ಮೆಕ್ಕೆ ವೃತ್ತದಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳ ಅಣಕು ಪ್ರದರ್ಶನ ಮಾಡಲಾಯಿತು.ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡದೇ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಶಾಸಕರ ವಿರುದ್ಧ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.ಪದವಿಗಾಗಿ ಕಚ್ಚಾಡುತ್ತಿರುವ ಶಾಸಕರ ಅನರ್ಹತೆಗೆ ಹಾಗೂ ಶಾಸಕರ ಸದಸ್ಯತ್ವ ರದ್ದುಪಡಿಸಿ ರಾಜ್ಯದಿಂದ ಗಡಿಪಾರು ಮಾಡಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದರು. ‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *