ಗದಗ : ಸಿ ಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪದರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇನ್ನು ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಧರಣಿಯಲ್ಲಿ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಿಟ್ಟು ಸರಕಾರ ಉಳಿಸಿಕೊಳ್ಳುವಲ್ಲಿ ಬಡಿದಾಡ್ತಿದೆ. ರಾಜ್ಯದ ಜನತೆಗೆ ಮೈತ್ರಿ ಸರಕಾರ ಅನ್ಯಾಯ ಎಸಗಿದೆ ಅಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು. ಇನ್ನು ಹಿಂಬಾಗಿಲಿನ ಸರಕಾರ ಕೂಡಲೇ ವಿಸರ್ಜಿಸಬೇಕು. ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





