ಚಾಮರಾಜನಗರ: ಎಸ್.ಡಿ.ಪಿ.ಐ ಹಾಗೂ ಪಿ.ಎಫ್ ಐ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿ ಜೆ ಪಿ ಕಾರ್ಯಕರ್ತರು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಡಳಿತ ಭವನದ ಮುಂಭಾಗ ಕೆಲಕಾಲ ಧರಣಿ ನಡೆಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನಪ್ಪ, ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ಸಂಘಟನೆಗಳು ನಮ್ಮ ಪಕ್ಷವನ್ನು ಬಹಳ ಕೀಳು ಮಟ್ಟದಿಂದ ಕಂಡು ಸಮಾಜದಲ್ಲಿ ಕೆಟ್ಟ ವಾತಾವರಣ ಹಬ್ಬಿಸುವ ನಿಟ್ಟಿನಲ್ಲಿ ಕಾರ್ಯನಿರ್ವಸುತ್ತಿದ್ದು,ಇಡೀ ಹಿಂದು ಸಮಾಜವನ್ನೆ ಕೆಳಮಟ್ಟಕ್ಕೆ ತೋರುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದರು.ದೇಶದ್ರೋಹಿ ಪಕ್ಷ ಹಾಗೂಸಮಾಜಕ್ಕೆ ಕಂಟಕವಾಗಿರುವ ಇಂತಹ ಸಂಘಟನೆಗಳನ್ನು ತಕ್ಷಣ ಬ್ಯಾನ್ ಮಾಡಬೇಕೆಂದು ಅವರು ಆಗ್ರಹಿಸಿದರು.ಇಂತಹ ಸಂಘಟನೆಗಳ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ತೆಗೆದು ಕೊಳ್ಳಬೇಕೆಂದು ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





