Breaking News

ಎಡೆಬಿಡದೇ ಸುರಿಯುತ್ತಿರುವ ಮೇಘರಾಜ ಜನಜೀವನ ಅಸ್ತವ್ಯಸ್ತ

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ .ಮಂಗಳವಾರ ಮಧ್ಯಾಹ್ನ ಆರಂಭಗೊಂಡ ಮಳೆ ಎಡೆ ಬಿಡದೆ ಸುರಿಯುತ್ತಿದೆ .ನಗರದ ಹೊರವಲಯದ ಆಕಾಶಭವನ ಎಂಬಲ್ಲಿ ಭೂ ಕುಸಿತ ಉಂಟಾಗಿದೆ .ಎರಡು ಮನೆಗಳಿಗೆ ಹಾನಿಯಾಗಿದೆ .ಮಂಗಳೂರು ಮಹಾನಗರ ಪಾಲಿಕೆ ಪರಿಹಾರ ಕಾರ್ಯಾಚರಣೆ ಆರಂಭಿಸಿದೆ .ಪುತ್ತೂರು ತಾಲೂಕಿನ ನರಿಮೊಗರು ಸರಕಾರಿ ಶಾಲೆಯ ಶೌಚಾಲಯದ ಮೇಲೆ ಮರ ಉರುಳಿ ಬಿದ್ದ ಕಾರಣ ಹಾನಿ ಆಗಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾರೆ .ನಿರಂತರ ಮಳೆ ಆಗುತಿರುವುದರಿಂದ ರೈತರು ಸಂಭ್ರಮದಲ್ಲಿದ್ದಾರೆ.ಇನ್ನು ಉಳುಮೆ ಕಾರ್ಯ ಆರಂಭವಾಗಲಿದೆ .ಉಳ್ಳಾಲದಲ್ಲಿ ಕಡಲ್ಕೊರೆತ ಹಾವಳಿಯೂ ತೀವ್ರಗೊಂಡಿದೆ .ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ .

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *