Breaking News

ಸರ್ಕಾರ ಮೇಡಿಕಲ್ ಕಾಲೇಜ್ ಕೈಬಿಟ್ಟಿರುವುದನ್ನು ವಿರೋಧಿಸಿ ಬಂದ್ ಕರೆ

ಯಾದಗಿರಿ: ಉದ್ದೇಶಿತ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಇಂದು ಯಾದಗಿರಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಕರೆ ನೀಡಿರುವ ಈ ಬಂದ್ ಗೆ, ಕನ್ನಡಪರ ಸಂಘಟನೆ ಸೇರಿದಂತೆ ಒಟ್ಟು 61 ಸಂಘಟನೆಗಳಿಂದ ಬಂದ್ ಬೆಂಬಲ ನೀಡಲಾಗಿದೆ. ಇನ್ನೂ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಸಹ ಬಂದ್ ಗೆ ಕೈ ಜೋಡಿಸಿದ್ದು, ನಗರದಲ್ಲಿ ವ್ಯಾಪಾರ- ವಹಿವಾಟು, ಆಟೋ ಮತ್ತು ಸರಕಾರಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲಾ ಬಿಜೆಪಿ ಮತ್ತು ಬಂದ್ ಗೆ ಬೆಂಬಲ ‌ನೀಡಿರುವ ವಿವಿಧ ಸಂಘಟನೆಗಳಿಂದ, ನಗರದ ಮೈಲಾಪುರ ಬೇಸ್ನಿಂದ ನಗರ ಸಭೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಈ ಮೆರವಣಿಗೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ಪಾಲ್ಗೊಂಡಿದ್ದಾರೆ. ಕಳೆದ ತಿಂಗಳು ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದ ಸಿಎಮ್ ಕುಮಾರಸ್ವಾಮಿ, ಜಿಲ್ಲೆಗೆ ಮೆಡಿಕಲ್ ಕಾಲೇಜು ಅವಶ್ಯವಿಲ್ಲ, ವೈದ್ಯಕೀಯ ಕಾಲೇಜು ಬದಲಾಗಿ ಜಿಲ್ಲಾಸ್ಪತ್ರೆಯನ್ನೇ ಮೇಲ್ದರ್ಜಗೆ ಏರಿಸೋದಾಗಿ ಹೇಳಿದ್ರು. ಅಲ್ಲದೆ ಇಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿದ್ರೆ ಅದು ಜಿಲ್ಲೆಯ ಜನರಿಗಿಂತ ಹೊರಗಿನವರಿಗೆ ಅನುಕೂಲವಾಗತ್ತದೆ ಎಂಬ ಹೇಳಿಕೆ ಸಹ ನೀಡಿದಮದ್ದು, ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿತ್ತು. ಸಿಎಮ್ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಸ್ಥಳೀಯ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮತ್ತು ವಿವಿಧ ಸಂಘಟನೆಗಳು ಇಂದು ಬಂದ್ ಗೆ ಕರೆ ನೀಡಿವೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *