Breaking News

ಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ

ಚಾಮರಾಜನಗರ: ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಬಿಎಸ್ ಪಿ ಶಾಸಕ ಹಾಗೂ ಮಾಜಿ ಸಚಿವ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ.ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ರಾಜ್ಯ ರಾಜಕೀಯದ ಬೆಳವಣಿಗೆ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಇಳಿದಿದೆ ಎಂದರು. ರಾಜ್ಯದ ಜನರು ಶಾಸಕರ ಆಟ ನೋಡುತ್ತಿದ್ದಾರೆ. ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು. ಸಮ್ಮಿಶ್ರ ಸರ್ಕಾರಕ್ಕೆ ನನ್ನದು ವಿಷಯಾಧಾರಿತ ಬಾಹ್ಯ ಬೆಂಬಲವಿದೆ. ಸದ್ಯಕ್ಕೆ ನಾನು ಸಮ್ಮಿಶ್ರ ಸರ್ಕಾರದ ಜೊತೆಗಿದ್ದೇನೆ. ನಾನು ಬಿ.ಎಸ್ಪಿ ಶಾಸಕ ಬಿ.ಜೆ.ಪಿ ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಬಿ.ಜೆ.ಪಿಯವರು ನನ್ನನ್ನು ಸಂಪರ್ಕ ಮಾಡಿಲ್ಲ. ಯಡಿಯೂರಪ್ಪ ರವರು ಭೇಟಿ ಮಾಡಿದರೆ ಮಾತನಾಡುವೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ, ಸರ್ಕಾರ ಸುಭದ್ರವಾಗಿದೆ ಎಂದರು.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಉಸ್ತುವಾರಿ ನೇಮಕ…

ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ …

Leave a Reply

Your email address will not be published. Required fields are marked *