ಮಂಡ್ಯ: ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಎಸ್.ರೇವಣ್ಣ ಅವರು 2019ನೇ ಸಾಲಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ವಾರ್ಷಿಕ ದಿನಚರಿ ಪುಸ್ತಕವನ್ನು ಬಿಡುಗಡೆ ಮಾಡಿದರು.ಸಮಾಜ ಪರಿವರ್ತಕರಾದ ಶಿಕ್ಷಕರು ಶಿಸ್ತು ಮತ್ತು ಬದ್ಧತೆಯನ್ನು ಅಳವಡಿಸಿಕೊಂಡು ಪಾಠಪ್ರವಚನಗಳ. ಬೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿ ಬದಲಾಗಬೇಕು ಎಂದು ಕಿವಿಮಾತು ಹೇಳಿದರು.. ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪಿ.ಜೆ.ವೆಂಕಟರಾಮು, ಶಿಕ್ಷಣ ಸಂಯೋಜಕರಾದ ನಾಗೇಶ್, ಚಂದ್ರಶೇಖರ್, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





