ಚಾಮರಾಜನಗರ: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಾಗಿ ಜಿಲ್ಲಾಡಳಿತ ಭವನ ತಲುಪಿ ಅಲ್ಲಿ ಕೆಲಕಾಲ ಧರಣಿ ನಡೆಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸುಜಾತ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಬೇಕು.ರಾಜ್ಯದ ಹಲವಾರು ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರದ ಕಾರ್ಯಕರ್ತರಿಗೆ ಗೌರವಧನ ನೀಡಿಲ್ಲ. ಕೆಲವು ಅಂಗನವಾಡಿಗಳಿಗೆ ಕೋಳಿ ಮೊಟ್ಟೆ, ತರಕಾರಿ ಇತ್ಯಾದಿ ಅವಶ್ಯಕತೆ ಇರುವ ವಸ್ತುಗಳನ್ನು ಸರಬರಾಜು ಮಾಡುತ್ತಿಲ್ಲಾ ಎಂದು ಆರೋಪಿಸಿದರು.ನಮಗೆಲ್ಲರಿಗೂ ಖಾಯಂ ಮಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ತೆಗೆದು ಕೊಳ್ಳಬೇಕೆಂದು ಅವರು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





