Breaking News

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣ

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿಯಾಗಿದ್ದು, ಜಗಳ ಅತಿರೇಕಕ್ಕೇರಿದ್ದು, ಗಲಾಟೆ ಒಬ್ಬನ ಕೊಲೆಯ ಮುಖಾಂತರ ಅಂತ್ಯಗೊಂಡಿರುವ ಘಟನೆ ದಾವಣಗೆರೆಯ ಅಣಜಿ ಗ್ರಾಮದಲ್ಲಿ ನಡೆದಿದೆ.ಇಲ್ಲಿನ ಅಂಜಿನಿ (24) ಕೊಲೆಯಾದ ವ್ಯಕ್ತಿ. ಅಂಜನಿ ಹಾಗೂ ಬಾಬು ಎಂಬುವವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಏರ್ಪಟ್ಟಿದೆ. ಜಗಳ ತಾರಕಕ್ಕೇರಿ ಬಾಬು ಅಂಜಿನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಕೂಡಲೇ ಅಂಜನಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬೀಗುವಿನ ವಾತವಾರಣ ನಿರ್ಮಾಣವಾಗಿದ್ದು, ನ್ಯಾಯವನ್ನು ಒದಗಿಸಲು ಆಗ್ರಹಿಸಿಮೃತನ ಶವವನ್ನಿಟ್ಟು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ಕೈಗೊಂಡಿದ್ದಾರೆ.ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *