Breaking News

ಆನೆ ದಾಳಿಗೆ ಯುವಕ ಬಲಿ

ಚಾಮರಾಜನಗರ: ಆನೆ ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಬಾಬು (27) ಮೃತ ದುರ್ದೈವಿ ಎಂದು ಹೇಳಲಾಗಿದೆ. ತಾಳ ಬೆಟ್ಟದ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಆನೆ ದಾಳಿ ನಡೆಸಿದೆ. ಮಲೆ ಮಹದೇಶ್ವರ ಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *