ಕೋಲಾರ : ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ, ಸಿಎಂ ಕುಮಾರಸ್ವಾಮಿ ಅವರು ಕೋಲಾರ ಜಿಲ್ಲೆಗೆ ಭರ್ಜರಿ ಗಿಪ್ಟ್ ಕೊಟ್ಟಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎಂವಿಕೆ ಗೋಲ್ಡನ್ ಡೇರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. 50 ಕೋಟಿ ರುಪಾಯಿ ಅನುದಾನದಲ್ಲಿ ಮೊದಲನೇ ಕಂತಾಗಿ 25 ಕೋಟಿ ರುಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಕುಮಾರಸ್ವಾಮಿ ಹಣವನ್ನ ಕೂಡಲೇ ಬಿಡುಗಡೆ ಮಾಡುವಂತೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಮಾಲೂರು ಶಾಸಕರೂ ಆಗಿರುವ ಕೋಮುಲ್ ಅಧ್ಯಕ್ಷ ಕೆವೈ ನಂಜೇಗೌಡ ಅವರು ಎಂವಿಕೆ ಗೋಲ್ಡನ್ ಡೇರಿಗೆ 50 ಕೋಟಿ ರುಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ ಮಾಡಿರುವ ಪತ್ರದ ಬಗ್ಗೆ ಉಲ್ಲೇಖಿಸಲಾಗಿದೆ. ಸಿಎಂ ಕುಮಾರಸ್ವಾಮಿ ವಿರುದ್ದ ಅತೃಪ್ತಿ ವ್ಯಕ್ತಪಡಿಸಿ ಒಂದೆಡೆ ಶಾಸಕರು ರಾಜೀನಾಮೆ ನೀಡುತ್ತಿದ್ದರೆ, ಮತ್ತೊಂದೆಡೆ ಉಳಿದ ಶಾಸಕ ಮನವೊಲಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಅನ್ನೋದ್ದಿಕ್ಕೆ ಈ ಪ್ರಕರಣ ನಿದರ್ಶನವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





