ಕೋಲಾರ : ಸಿಲಿಂಡರ್ ಸ್ಪೋಟಗೊಂಡು ಮನೆಯ ಛಾವಣಿ ಕುಸಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಮಾಲೂರು ತಾಲೂಕಿನ ಕುಡಿಯನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗ್ರಾಮದ ರಾಜಪ್ಪನವ್ರ ಮನೆಯ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟಗೊಂಡ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಸಿಲಿಂಡರ್ ಸ್ಪೋಟಕ್ಕೆ ಮನೆಯ ಛಾವಣಿ ಕುಸಿದಿದ್ದು, ಗೋಡೆಗಳು ಬೀಳುವ ಹಂತಕ್ಕೆ ತಲುಪಿದೆ. ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, 2 ಲಕ್ಷ ರುಪಾಯಿಗೂ ಅಧಿಕ ಹಾನಿ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ಆಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





