ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಕೃಷ್ಣಂರಾಜು ಮತ್ತು ಯೋಜನಾ ನಿರ್ದೇಶಕರಾದ ಗಣಪತಿನಾಯಕ ಅವರ ನೇತೃತ್ವದಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯು ನಡೆಯಿತು ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಫಲಪ್ರದವಾಗಿ ಜಾರಿಗೊಳಿಸಿ ಬಡಜನರ ಸೇವೆಯಲ್ಲಿ ಭಗವಂತನನ್ನು ಕಾಣುವ ಪ್ರಯತ್ನ ಮಾಡಬೇಕು ಎಂದು ಯೋಜನಾ ನಿರ್ದೇಶಕ ಗಣಪತಿನಾಯಕ್ ಮನವಿ ಮಾಡಿದರುಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ ಕೆಲಸ ಮಾಡಬೇಕು.‌ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡುವುದು ಗ್ರಾಮ ಪಂಚಾಯತಿಗಳ ಕರ್ತವ್ಯವಾಗಿದೆ ಎಂದು ಹೇಳಿದ ಉಪಕಾರ್ಯದರ್ಶಿ ಗಣಪತಿನಾಯಕ್ ಸರ್ಕಾರಿ ಯೋಜನೆಗಳ ಲೆಕ್ಕ ಶೀರ್ಷಿಕೆಯ ಹಣವನ್ನು ನಿಖರವಾಗಿ ಖರ್ಚುಬ ಮಾಡಿ ಲೆಕ್ಕಪತ್ರಗಳು ಹಾಗೂ ಯೋಜನೆಯ ಯಶಸ್ವಿಯ ಬಗ್ಗೆ ಗಮನಹರಿಸಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು..ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿ ರವಿಕುಮಾರ್, ಉಪಕಾರ್ಯದರ್ಶಿ ಎನ್.ಡಿ.ಪ್ರಕಾಶ್, ಮುಖ್ಯ ಯೋಜನಾಧಿಕಾರಿ ಧನುಷ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

Share News

About admin

Check Also

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ …

Leave a Reply

Your email address will not be published. Required fields are marked *

You cannot copy content of this page