Breaking News

ಆಸ್ತಿ ವಿಷಯಕ್ಕೆ ಮಾರಾಮಾರಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಜಿಲ್ಲೆಯ ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ಸವತಿಯರ ನಡುವೆ ಘರ್ಷಣೆ ನಡೆದಿದೆ.ಘರ್ಷಣೆಯಲ್ಲಿ ಹಿರಿಯ ಹೆಂಡತಿ ಲಕ್ಷ್ಮೀ(35) ಅವರಿಗೆ ಕಿರಿಯ ಹೆಂಡತಿ ಮಂಜಮ್ಮ, ಪತಿ ಕೃಷ್ಣಯ್ಯ ಮತ್ತು ಮಗ ಅವಿಕಿರಣ ಅವರು ಸೇರಿಕೊಂಡು ಮಚ್ಚು ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮಿರಕ್ಷಣೆ ಕೋರಿ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.‌ದೂರು ದಾಖಲಿಸಿಕೊಂಡಿರುವ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *