ಮಂಡ್ಯ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ 2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಆಶಾಕಾಮತ್ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಸಂಯಮವನ್ನು ಜೀವನದಲ್ಲಿ ಅಳವಡಿಸಿಕೊಂಡು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಜೀವನದಲ್ಲಿ ಯಶಸ್ಸುಗಳಿಸಬೇಕು..ವಿಶ್ವಕಂಡ ಶ್ರೇಷ್ಠ ಎಂಜಿನಿಯರುಗಳಲ್ಲಿ ಒಬ್ಬರಾಗಿರುವ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರಂತೆ ಶ್ರೇಷ್ಠ ಸಾಧನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು..ಸರ್.ಎಂ.ವಿ ಅವರ ಜೀವನದ ಆದರ್ಶಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಭವಿಷ್ಯದ ಎಂಜಿನಿಯರುಗಳಾಗಲು ಪ್ರಯತ್ನ ಮಾಡಬೇಕು ಎಂದು ಆಶಾ ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಯಾಂತ್ರಿಕ ವಿಭಾಗದ ಮುಖ್ಯಸ್ಥ ಗುರುಸ್ವಾಮಿ ಮಾತನಾಡಿ ವಿದ್ಯಾರ್ಥಿಗಳು ಶ್ರಮಪಟ್ಟು ವ್ಯಾಸಂಗ ಮಾಡಿ ಸಾಧಕರಾಗಬೇಕು. ತಾಂತ್ರಿಕ ಶಿಕ್ಷಣವು ಯುವಜನರ ಬದುಕನ್ನು ರೂಪಿಸುವುದಲ್ಲದೇ ಉಜ್ವಲವಾದ ಭವಿಷ್ಯವನ್ನು ರೂಪಿಸುವುದು ಆದ್ದರಿಂದ ಯುವಜನರು ಸೋಲಿಗೆ ಹೆದರದೇ ಆತ್ಮವಿಶ್ವಾಸದಿಂದ ಗುರಿಸಾಧನೆಯ ಕಡೆಗೆ ಹೆಜ್ಜೆಹಾಕಿ ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಕಿವಿಮಾತು ಹೇಳಿದರು..
ವಿಜ್ಞಾನ ವಿಭಾಗದ ಮುಖ್ಯಸ್ಥ ಮಾರೇನಹಳ್ಳಿ ಸುಬ್ರಹ್ಮಣ್ಯ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ನಾಗೇಶ್, ಎಲೆಕ್ಟ್ರಾನಿಕ್ಸ್ ವಿಭಾಗದ ಕೃಷ್ಣ, ಕ್ರೀಡಾವಿಭಾಗದ ಸತೀಶ್, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ವಿಭಾಗದ ದೊರೆಸ್ವಾಮಿ, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ವಿಭಾಗದ ವಿಜಯ, ಕಂಪ್ಯೂಟರ್ ಸೈನ್ಸ್ ವಿಭಾಗದ ಆಶಾಲತ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು… ಉಪನ್ಯಾಸಕರು, ಸಿಬ್ಬಂಧಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.. ಉಪನ್ಯಾಸಕರಾದ ವನಿತಾ ಸ್ವಾಗತಿಸಿದರು, ಮಮತಾ ವಂದಿಸಿದರು, ರಶ್ಮೀ ಮತ್ತು ದಿವ್ಯ ಕಾರ್ಯಕ್ರಮ ನಿರೂಪಿಸಿದರು..
bigtvnews | Hubli Dharwad News | Kannada News | Karnataka News Hubli News | News In Hubli | Local news





