ಮಂಡ್ಯ: ಮಂಡ್ಯ ಪಟ್ಟಣದ ರಾಮದಾಸ್ ರೆಸ್ಟೋರೆಂಟ್ ಸುಲೋಚನಮ್ಮ ಸಭಾಂಗಣದಲ್ಲಿ ಗ್ರಾಮ್ ಸಂಸ್ಥೆಯು ಸುಗಮ್ಯ ಶಿಕ್ಷಣ ಭಾಗೀದಾರರ ಪರಿಚಯ ಕಾರ್ಯಕ್ರಮ ನಡೆಯಿತು…ಸುಗಮ್ಯ ಶಿಕ್ಷಾ ಗ್ರಾಮ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಲ್.ಬಸವರಾಜು ಮಾತನಾಡಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದು, ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಗ್ರಾಮ್ ಸಂಸ್ಥೆಯ ಸುಗಮ್ಯಶಿಕ್ಷಾ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಿ ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣವನ್ನು ನೀಡುವುದು ನಮ್ಮ ಸಂಸ್ಥೆಯ ಮುಖ್ಯ ಉದ್ಧೇಶವಾಗಿದೆ. ಶಿಕ್ಷಕರು ಸಂಪೂರ್ಣ ಸಹಕಾರ ನೀಡಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು… ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿ ಎಸ್.ರೇವಣ್ಣ ಮಾತನಾಡಿ ಗ್ರಾಮ್ ಸಂಸ್ಥೆಯ ಸುಗಮ್ಯ ಶಿಕ್ಷಾ ಕಾರ್ಯಕ್ರಮವು ವರವಾಗಿ ನಮ್ಮ ತಾಲ್ಲೂಕಿಗೆ ಬಂದಿದೆ. ಪ್ರಾರಂಭಿಕವಾಗಿ ತಾಲ್ಲೂಕಿನ ಬೂಕನಕೆರೆ ಹಿರಿಯ ಪ್ರಾಥಮಿಕ ಶಾಲೆ, ತೆಂಡೇಕೆರೆ ಸರ್ಕಾರಿ ಪ್ರೌಢಶಾಲೆ, ಕೆ.ಆರ್.ಪೇಟೆ ಪಟ್ಟಣದ ಶತಮಾನದ ಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸುಗಮ್ಯ ಶಿಕ್ಷಾ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ. ಇಲಾಖೆಯ ವತಿಯಿಂದ ಆತ್ಮೀಯ ಸ್ವಾಗತ ಬಯಸುತ್ತೇನೆ ಎಂದು ಹೇಳಿದ ರೇವಣ್ಣ ಶಿಕ್ಷಕರು ನಿತ್ಯವೂ ಅಧ್ಯಯನಶೀಲರಾಗಿ ಪಾಠ ಪ್ರವಚನಗಳ ಬೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಪರಿವರ್ತಕರಂತೆ ಕೆಲಸ ಮಾಡಬೇಕು ಎಂದು ಮನವಿ ಮಾಡುದರು..ಕೆಪಿಎಸ್ ಶಾಲೆಯ ಪ್ರಾಂಶುಪಾಲ ಸತ್ಯ, ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುಪ್ರೌಢಶಾಲಾಶಿಕ್ಷಾ ಕಾರ್ಯಕ್ರಮದ ಮುಖ್ಯಸ್ಥರಾದ ಉಷಾ, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ, ತೆಂಡೇಕೆರೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಮುತ್ತುರಾಜು, ಗ್ರಾಮ್ ಸಂಸ್ಥೆಯ ಮಹದೇವಸ್ವಾಮಿ, ರವಿ, ಗೋವಿಂದರಾಜು, ರಂಜನಿ ಮತ್ತಿತರರು ಭಾಗವಹಿಸಿದ್ದರು….
bigtvnews | Hubli Dharwad News | Kannada News | Karnataka News Hubli News | News In Hubli | Local news





