Breaking News

ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ ವಾಲ್ಮೀಕಿ ಶ್ರೀ

ದಾವಣಗೆರೆ: ಪರಿಶಿಷ್ಟ ಪಂಗಡ ಕ್ಕೆ ಈಗ ಇರುವ ಶೇ ೩.೫ ರಷ್ಟು ಮೀಸಲಾತಿಯನ್ನ ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇ.೭.೫ಕ್ಕೆ ಏರಿಸುವಂತೆ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಶ್ರೀಗಳು ಸರ್ಕಾರಕ್ಕೆ ಒತ್ತಾಯಿಸಿದರು.ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಈಡೇರಬೇಕು.ವಿಳಂಬವಾದ್ರೆ ನಮ್ಮ ೧೫ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆಎಚ್ಚರಿಕೆ ನೀಡಿದರು.ಕಳೆದ ತಿಂಗಳು ಬೇಡಿಕೆ ಈಡೇರಿಕೆಗಾಗಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದರು. ಆ ವೇಳೆ ರಾಜ್ಯ ಸರ್ಕಾರಎರಡು ತಿಂಗಳು ಗಡುವು ಕೇಳಿತ್ತು. ಈ ಹಿನ್ನೆಲೆಯಲ್ಲಿ ಈಗಲಾದರೂ ಬೇಡಿಕೆ ಈಡೇರಿಸಲು ವಿಳಂಬವಾದ್ರೆ ಮತ್ತೆ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ಇರುವ ವಾಲ್ಮೀಕಿ ಸಮಾಜ ೧೫ ಜನ ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದರೆ ರಾಜೀನಾಮೆ ಕೊಡುವುದು ಶತಸಿದ್ದ ಎಂದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *