ಆನೇಕಲ್ : ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇಲ್ಲದ ಜೆಡಿಎಸ್ ನಾಯಕರುಗಳಿಗೆ ಬಿಜೆಪಿ ಕಡೆ ಬೊಟ್ಟು ಮಾಡೋದು ಸರಿಯಲ್ಲಬಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಚಿತ್ರದುರ್ಗ ಲೋಕಸಭಾ ಸದಸ್ಯ ನಾರಾಯಣಸ್ವಾಮಿ ಆಕ್ರೋಶವನ್ನು ಹೊರ ಹಾಕಿದ್ದಾರೆ.ಆನೇಕಲ್ ನ ಮಾಯಸಂದ್ರ ಗ್ರಾಮದ ಬಳಿ ಬಿಜೆಪಿ ಸಂಘಟನೆ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಜನ ತಿರಸ್ಕಾರ ಮಾಡಿದಾಗಲೇ ರಾಜೀನಾಮೆ ನೀಡಬೇಕಿತ್ತು ಆದರೆ ನೈತಿಕತೆಯಿಲ್ಲದ ಮುಖ್ಯಮಂತ್ರಿ ಕುಮಾರಸ್ವಾಮಿ ಮಗನನ್ನು ಹೀನಾಯವಾಗಿ ಸೋಲಿಸಿದ ರಾಜ್ಯದ ಜನರ ಕ್ಷಮೆ ಕೇಳಬೇಕಿತ್ತು. ಅದಲ್ಲದೆ ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇಲ್ಲದ ಜೆಡಿಎಸ್ ನಾಯಕರುಗಳಿಗೆ ಬಿಜೆಪಿ ಕಡೆ ಬೊಟ್ಟು ಮಾಡುವುದು ಸರಿಯಲ್ಲ. ಇಂಥವರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವೇ ಎಂದು ಆಕ್ರೋಶವನ್ನು ಹೊರ ಹಾಕಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಮುನಿರತ್ನನಾರಯಣಪ್ಪ , ಕೆಸಿ ರಾಮಚಂದ್ರ,ಸಿಕೆ ಜಗನ್ನಾಥ್, ಬಿಜೆಪಿ ಸಂಘಟನಾ ಸಂಚಾಲಕ ಭರತ್ ಸೇರಿದಂತೆ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





