ರಾಯಚೂರು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ನಡೆಸಿ ಪೋಲಿಸರು ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿದ ಪೋಲಿಸರು ಮಾನಶಯ್ಯ , ಶಿವು ನಿಲವಂಜಿ, ಭೀಮಪ್ಪ ಎಂಬುವವರನ್ನು ಬಂಧಿಸಿದ್ದಾರೆ.
ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು.
ಒಟ್ಟು ಸುಮಾರು ೫ ಲಕ್ಷ ೧೦ ಸಾವಿರ ಬೆಲೆ ಬಾಳುವ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ದೇವದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





