Breaking News

ಹೆಜ್ಜೇನು ದಾಳಿಯಿಂದ ವ್ಯಕ್ತಿ ಅಸ್ವಸ್ಥ

ಮಂಡ್ಯ: ಜಿಲ್ಲೆಯ ಭಾರತೀಪುರ ಗ್ರಾಮದಲ್ಲಿ ಹೆಜ್ಜೇನು ದಾಳಿಯಿಂದಾಗಿ ಕೆ.ಆರ್.ಪೇಟೆ ಬಾರ್ ಬೆಂಡರ್ ನಾಸೀರ್ ಅಸ್ವಸ್ಥಗೊಂಡಿದ್ದಾರೆ. ಕೃಷ್ಣರಾಜಪೇಟೆ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿ ಬಾರ್ ಬೆಂಡರ್ ನಾಸೀರ್(45) ಅವರ ಮೇಲೆ ಹೆಜ್ಜೇನು ಹಿಂಡು ದಾಳಿ ಮಾಡಿ, ಜೇನು ನೊಣಗಳ ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿರುವ ನಾಸೀರ್ ಕೆ.ಆರ್ ಪೇಟೆಯ ದುಂಡಶೆಟ್ಟಿಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನ ಭಾರತೀಪುರ ಗ್ರಾಮಕ್ಕೆ ಹೋಗಿ ಕೆ.ಆರ್.ಪೇಟೆ ಪಟ್ಟಣಕ್ಕೆ ಹಿಂತಿರುಗಿ ಬರುವಾಗ ನಿನ್ನೆ ಸಂಜೆ ಈ ಘಟನೆ ನಡೆದಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *